alex Certify BIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: DYSP ಹುದ್ದೆಗಳು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ 30 ಡಿ.ವೈ.ಎಸ್.ಪಿ.ಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶಿಸಿದೆ.

6 ವಲಯಗಳ ಆಡಳಿತ ವಿಭಾಗ ಸೇರಿದಂತೆ ವಿವಿಧ ಪೊಲೀಸ್ ಘಟಕಗಳಲ್ಲಿರುವ 30 ಡಿ.ವೈ.ಎಸ್.ಪಿ. ಹುದ್ದೆಗಳನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸ್ಥಾನಕ್ಕೆ ಮೇಲ್ದರ್ಜೆಗೇರಿಸಲಾಗಿದೆ. 31 ಜಿಲ್ಲೆಗಳ ಪೈಕಿ 24 ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರ ಹುದ್ದೆಗಳಿದ್ದು, ಇನ್ನುಳಿದ ಆರು ಜಿಲ್ಲೆಗಳಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ಇರುವುದಿಲ್ಲ.

ಜಿಲ್ಲಾ ಪೊಲೀಸ್ ಅಧೀಕ್ಷಕರ ಕಾರ್ಯ ಒತ್ತಡ ತಗ್ಗಿಸುವ ಉದ್ದೇಶದಿಂದ ಮತ್ತು ಆಡಳಿತಾತ್ಮಕವಾಗಿ ನೆರವಾಗಲು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು ಸೃಜಿಸಲಾಗಿದೆ.

ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ವಿಜಯಪುರ, ಗದಗ, ಧಾರವಾಡ, ಬಳ್ಳಾರಿ, ಕಲಬುರಗಿ, ಬಾಗಲಕೋಟೆ, ವಿಜಯನಗರ, 6 ಐಜಿಪಿ ವಲಯ, ಸಿಐಡಿ, ಸಿಐಡಿ ಅರಣ್ಯ ಘಟಕಕ್ಕೆ ತಲಾ ಎರಡು ಹುದ್ದೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...