
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ವರ್ಗಾವಣೆಗೊಳಿಸಿದ 46 ಡಿವೈಎಸ್ಪಿ ಹಾಗೂ 261 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ.
ಡಿಜಿ ಐಜಿಪಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಡಿವೈಎಸ್ಪಿ ವೃಂದದ ಅಧಿಕಾರಿಗಳು, ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಲೋಕಸಭಾ ಚುನಾವಣೆ ನಿಮಿತ್ತ ಚುನಾವಣೆ ಆಯೋಗದ ಮಾರ್ಗಸೂಚಿ ಅನ್ವಯ ವಿವಿಧ ದಿನಾಂಕಗಳಂದು ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು. ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡಿರುವುದರಿಂದ ಸದರಿಯವರುಗಳನ್ನು ವರ್ಗಾವಣೆಯ ಪೂರ್ವ ಸ್ಥಳಗಳಿಗೆ ಪುನರ್ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.
ಸಂಬಂಧಪಟ್ಟ ಘಟಕ ಅಧಿಕಾರಿಗಳು ವರ್ಗಾವಣೆಗೊಂಡ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಯಾವುದೇ ಸೇರುವಿಕೆ ಕಾಲ ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು. ಈ ಬಗ್ಗೆ ಕಚೇರಿಗೆ ಪಾಲನಾ ವರದಿ ಸಲ್ಲಿಸುವುದು ಎಂದು ತಿಳಿಸಲಾಗಿದೆ.