ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಇ-ಖಾತಾ ವಿತರಣೆ ಬಗ್ಗೆ ಸಮಸ್ಯೆಯಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ವತಿಯಿಂದ ನಾಗರಿಕ ಸಹಾಯವಾಣಿ ಆರಂಭಿಸಲಾಗಿದೆ.
ಇ-ಖಾತಾ ಪಡೆಯಲು ಹಲವು ಸಮಸ್ಯೆಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇ-ಖಾತಾ ಬಗ್ಗೆ ತೊಂದರೆಯಾಗಿದ್ದಲ್ಲಿ ಸಹಾಯವಾಣಿ ಸಂಖ್ಯೆ 94806 83695ಕ್ಕೆ ಕರೆ ಮಾಡಬಹುದು
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆಯಂತೆ ಸಹಾಯವಾಣಿ ಆರಂಭಿಸಲಾಗಿದೆ. ಯಾರೇ ಲಂಚ ಕೇಳಿದರೂ ಸಹಾಯವಾಣಿಗೆ ಕರೆ ಮಾಡಿ ತಿಳಿಸಲು ಸೂಚಿಸಲಾಗಿದೆ. ಇ-ಖಾತಾ ಪಡೆಯಲು ವಿಳಂಬ ಮಾಡಿದರೂ ಕೂಡ ದೂರು ನೀಡಲು ತಿಳಿಸಲಾಗಿದೆ.