ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ – ಖಾತಾ ʼಬೆಂಗಳೂರು ಒನ್ ಕೇಂದ್ರʼಗಳಲ್ಲೂ ಶೀಘ್ರವೇ ಲಭ್ಯವಾಗಲಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಇ – ಖಾತಾಗಳನ್ನು ಒದಗಿಸಲು ಪಾಲಿಕೆಯ ಪ್ರತಿ ಸಹಾಯಕ ಕಂದಾಯ ಅಧಿಕಾರಿ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ನಾಗರಿಕರು ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆ ಸಲ್ಲಿಸಿ ಇ – ಖಾತಾ ಪಡೆಯಬಹುದು ಎಂದು ಹೇಳಲಾಗಿದೆ.