alex Certify ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ: ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಮುಖ್ಯ ಮಾಹಿತಿ: ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸಿ

ದಾವಣಗೆರೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹರಾದ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿರುತ್ತದೆ. ಯೋಜನೆಯಡಿ ನೈಜ ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯುತ್ತಿದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ.  ಹೀಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹರಾದ ಫಲಾನುಭವಿಗಳು ಪಿಎಂ-ಕಿಸಾನ್ ಪೋರ್ಟಲ್‍ನ ಫಾರ್ಮರ್ಸ್ ಕಾರ್ನರ್  ನಲ್ಲಿ ಆಧಾರ್ ಸಂಖ್ಯೆಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ನಮೂದಿಸುವ ಮೂಲಕ ಸ್ವೀಕರಿಸಿದ ಒಟಿಪಿ ಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.

ಯಾವ ಫಲಾನುಭವಿಯ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯು ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆಗೆ ಇ-ಕೆವೈಸಿಗಾಗಿ ಕಳಿಸಿದ ಒಟಿಪಿಯು ಸ್ವೀಕೃತವಾಗುವುದಿಲ್ಲವೊ ಅಂತಹ ರೈತರು ನಾಗರಿಕ ಸೇವಾ ಕೇಂದ್ರಗಳಿಗೆ(CSC) ತೆರಳಿ ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಅನ್ನು ಮಾರ್ಚ್ 31 ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡುವ ಮೂಲಕ ಮಾಹಿತಿ ಪಡೆಯಬಹುದು ಎಂದು ಜಂಟಿಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...