ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ ರೈತರಿಗೆ ಇ-ಕೆವೈಸಿ ಮಾಡಿಸಲು ಜುಲೈ 07ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಪಿ.ಎಂ. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ನೋಂದಾಯಿತ ರೈತರು ಇ-ಕೆವೈಸಿ ಮಾಡುವುದು ಅತೀ ಅವಶ್ಯಕವಾಗಿದ್ದು, 14ನೇ ಕಂತಿನ ನೆರವಿನ ಹಣ ವರ್ಗಾವಣೆ ಇ-ಕೆವೈಸಿ ಮಾಡಿಸಿರುವ ಮತ್ತು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಬರುತ್ತದೆ. ಈ ಯೋಜನೆಯಡಿ ಇ-ಕೆವೈಸಿ ಮಾಡಿಸಲು ಅವಧಿ ವಿಸ್ತರಿಸಲಾಗಿದ್ದು, ಕೊಪ್ಪಳ ತಾಲೂಕಿನ ರೈತರು ಇದರ ಸದುಪಯೋಗ ಪಡೆದುಕೊಂಡು ಜುಲೈ 07ರೊಳಗಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು.
ರಾಜ್ಯ ಸರ್ಕಾರ ಮುಖ ದೃಢೀಕರಣ ಘೋಷಿಸಿದೊಂದಿಗೆ (ಫೇಸ್ ಅಥೆಂಟಿಕೇಷನ್ ಆಪ್ ಇ–ಕೆವೈಸಿ) ಪಿ.ಎಂ. ಕಿಸಾನ್ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿದೆ. ರೈತರು ಈ ಅಪ್ಲಿಕೇಶನನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್ಲೋಡ್ ಮಾಡಿ ಇ-ಕೆವೈಸಿ ಮಾಡಿಕೊಳ್ಳಬಹುದು. ಇತರೆ ರೈತರು ಇ-ಕೆವೈಸಿ ಮಾಡಿಸಲು ಸಹಾಯ ಮಾಡಬಹುದು. ತಮ್ಮ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಸೇವಾ ಸಿಂಧು ಸೆಂಟರ್‌ಗಳಿಗೆ ಭೇಟಿ ನೀಡಿ ಅಗತ್ಯ ಸೇವೆ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.