alex Certify ‘ಈ ಹಿಂದೆ ನನಗೂ ಆ ಅಭ್ಯಾಸವಿತ್ತು’ ; ವೇದಿಕೆಯಲ್ಲೇ ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಈ ಹಿಂದೆ ನನಗೂ ಆ ಅಭ್ಯಾಸವಿತ್ತು’ ; ವೇದಿಕೆಯಲ್ಲೇ ಗುಟ್ಟು ರಟ್ಟು ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ‘ರಾಷ್ಟ್ರೀಯ ವೈದ್ಯರ ದಿನಾಚರಣೆ’ಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಸಿಗರೇಟ್ ಆರೋಗ್ಯಕ್ಕೆ ಮಾರಕ ಎಂದರೂ ಕೂಡ ಸಿಗರೇಟ್ ಸೇದುತ್ತಾರೆ. ಜನರು ಕೂಡ ಜಾಗೃತರಾಗಬೇಕು. ದುಶ್ಚಟಗಳಿಂದ ದೂರವಿರಬೇಕು. ಹಿಂದೆ ನನಗೂ ಸಿಗರೇಟ್ ಸೇದುವ ಅಭ್ಯಾಸವಿತ್ತು. ಸಿಗರೇಟ್ ಸೇವನೆ ಬಿಟ್ಟು ದಶಕಗಳು ಕಳೆದರೂ ಹಿಂದೆ ಸೇದಿದ್ದರ ಪರಿಣಾಮದಿಂದಾಗಿ ಇತ್ತೀಚಿನ ವರ್ಷಗಳಲ್ಲಿ ಆಂಜಿಯೋಪ್ಲಾಸ್ಟಿ ಮಾಡಿಸಿಕೊಳ್ಳಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಬದಲಾಯಿಸಿಕೊಂಡರೆ ಅನೇಕ ರೋಗಗಳನ್ನು ತಡೆಗಟ್ಟಬಹುದಾಗಿದೆ. ಸಾಮಾಜಿಕ ಆರ್ಥಿಕ ಬೆಳವಣಿಗೆಗೆ ಶಿಕ್ಷಣ ಮತ್ತು ಆರೋಗ್ಯ ಬಹಳ ಮುಖ್ಯ. ಪ್ರತಿಯೊಬ್ಬರೂ ಆರೋಗ್ಯವಂತರಾಗಿ, ಆರ್ಥಿಕ ಶಕ್ತಿ ಹೊಂದಿದ್ದಾಗ ಮಾತ್ರ ಆರೋಗ್ಯಕರ ಸಾಮಾಜ ನಿರ್ಮಾಣ ಸಾಧ್ಯ. ವೈದ್ಯರು ಬಿ.ಸಿ.ರಾಯ್ ಅವರ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡಬೇಕು.

ಸಿಡುಬು, ಪ್ಲೇಗು, ಪೋಲಿಯೋ ಮುಂತಾದ ಕಾಯಿಲೆಗಳು ನಿರ್ಮೂಲನೆಯಾಗಿವೆ, ಕೆಲವು ನಿಯಂತ್ರಣಕ್ಕೆ ಬಂದಿವೆ. ಇವನ್ನೂ ನಿರ್ಮೂಲನೆ ಮಾಡಲು ಸಾಧ್ಯವಿದೆ. ವಿಜ್ಞಾನ – ತಂತ್ರಜ್ಞಾನ ಬೆಳೆದಂತೆಲ್ಲಾ ಕಾಯಿಲೆಗಳ ನಿರ್ಮೂಲನೆ ಹೆಚ್ಚು ಸಾಧ್ಯವಾಗುತ್ತಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದು, ಇದರ ಮೂಲೋಚ್ಚಾಟನೆ ಮಾಡಬೇಕು. ಈ ಬಗ್ಗೆ ಪರಿಶೀಲನಾ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಗ್ಗೆ ಸಾರ್ವಜನಿಕರೂ ಸಹ ಸರ್ಕಾರದೊಂದಿಗೆ ಕೈಜೋಡಿಸಬೇಕು. ಆಗ ಮಾತ್ರ ಇದರ ನಿವಾರಣೆ ಸಾಧ್ಯ ಎಂದರು.

ವೈದ್ಯ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ವೈದ್ಯೋ ನಾರಾಯಣೋ ಹರಿಃ ಎಂದು ಭಾವಿಸಲಾಗುತ್ತದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವವರು ಹಾಗೂ ಆರೋಗ್ಯ ರಕ್ಷಣೆ ಮಾಡುವವರು ವೈದ್ಯರು. ಕೊರೊನಾ ಸಂದರ್ಭದಲ್ಲಿ ವೈದ್ಯರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ತಮ್ಮ ಜೀವದ ಹಂಗನ್ನು ತೊರೆದು ವೈದ್ಯರು ದುಡಿದಿದ್ದಾರೆ. ಸಮಾಜದ ಆರೋಗ್ಯ ಕಾಪಾಡಲು ಸರ್ಕಾರವೂ ಪ್ರಯತ್ನ ಪಡುತ್ತಿದೆ. ಅನೇಕ ಕಾರ್ಯಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿವೆ. ಸರ್ಕಾರಿ ಆಸ್ಪತ್ರೆಗಳಿಗೆ ಬಡವರೇ ಹೆಚ್ಚು ಬರುತ್ತಾರೆ. ತಾವು ಹಸನ್ಮುಖಿಗಳಾಗಿ ರೋಗಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಪ್ರತಿ ವೈದ್ಯರೂ ಮಾಡಬೇಕು ಎಂದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...