alex Certify ಭೂಮಿಯೊಳಗೆ ಭಾರೀ ಶಬ್ಧದೊಂದಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೂಮಿಯೊಳಗೆ ಭಾರೀ ಶಬ್ಧದೊಂದಿಗೆ ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಭಾರಿ ಭೂಕುಸಿತ ಉಂಟಾಗಿದೆ. ಮದೆನಾಡು ಸಮೀಪದ ಸೀಮೆಹುಲ್ಲುಕಜೆ ಬೆಟ್ಟದಲ್ಲಿ ಭೂಕುಸಿತ ಉಂಟಾಗಿದೆ.

ಭೂಮಿಯೊಳಗೆ ಭಾರಿ ಶಬ್ದದೊಂದಿಗೆ ಭಾರಿ ಪ್ರಮಾಣದ ಕೆಸರು ಕೊಚ್ಚಿ ಬಂದಿದೆ. ಜೋಡುಪಾಲದವರೆಗೂ ಕೆಸರು ಮಿಶ್ರಿತ ನೀರು ಕೊಚ್ಚಿಕೊಂಡು ಬಂದಿದ್ದು, ಬೆಟ್ಟದ ತಪ್ಪಲಿನ 18 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.

ಕೊಡಗು ಜಿಲ್ಲೆ, ಮಡಿಕೇರಿ ತಾಲೂಕಿನ ಮದೆನಾಡು ಸಮೀಪ ರಾಷ್ಟ್ರೀಯ ಹೆದ್ದಾರಿ 275 ರ ಬಳಿ ಘಟನೆ ನಡೆದಿದೆ. ಮದೆನಾಡು, ಜೋಡುಪಾಲ, ಮಣ್ಣಂಗೇರಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ದಟ್ಟವಾದ ಮಂಜು ಕವಿದ ಹಿನ್ನೆಲೆಯಲ್ಲಿ ಭೂಕುಸಿತವಾದ ತೀವ್ರತೆ ಗೋಚರಿಸುತ್ತಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...