alex Certify ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೇಂದ್ರದಿಂದ ಮೊಬೈಲ್ ಗೆ ತುರ್ತು ಸಂದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಕೇಂದ್ರದಿಂದ ಮೊಬೈಲ್ ಗೆ ತುರ್ತು ಸಂದೇಶ

ನವದೆಹಲಿ: ಭೂಕಂಪ, ಸುನಾಮಿ, ಪ್ರವಾಹ ಪ್ರಕೃತಿ ವಿಕೋಪದಂತಹ ತುರ್ತು ಸಂದರ್ಭದಲ್ಲಿ ಮೊಬೈಲ್ ಮೂಲಕವೇ ಸಂದೇಶ ರವಾನಿಸುವ ವ್ಯವಸ್ಥೆಯನ್ನು ದೇಶಾದ್ಯಂತ ಯಶಸ್ವಿಯಾಗಿ ಪ್ರಯೋಗಕ್ಕೆ ಒಳಪಡಿಸಲಾಗಿದೆ.

ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜನರಿಗೆ ಮೊದಲೇ ಮಾಹಿತಿ ನೀಡಲು ಈ ವ್ಯವಸ್ಥೆಯನ್ನು ಬಳಕೆ ಮಾಡಲಿದ್ದು, ಪ್ರಯೋಗ ನಡೆಸಲಾಗಿದೆ.

ಗುರುವಾರ ಮಧ್ಯಾಹ್ನ 1:35ಕ್ಕೆ ದೇಶಾದ್ಯಂತ ಆಂಡ್ರಾಯ್ಡ್ ಸ್ಮಾರ್ಟ್ ಫೋನ್ ಮೊಬೈಲ್ ಬಳಕೆದಾರರಿಗೆ ಎಮರ್ಜೆನ್ಸಿ ಸಂದೇಶ ರವಾನೆ ಮಾಡಲಾಗಿದೆ. ಇದು ಪರೀಕ್ಷಾರ್ಥ ಸಂದೇಶವಾಗಿದ್ದು, ಇದನ್ನು ಭಾರತ ಸರ್ಕಾರದ ಟೆಲಿಕಾಂ ಸಚಿವಾಲಯದ ಬ್ರಾಡ್ ಕಾಸ್ಟಿಂಗ್ ಸಿಸ್ಟಮ್ ಮೂಲಕ ರವಾನಿಸಲಾಗಿದೆ. ನಿಮ್ಮ ಕಡೆಯಿಂದ ಈ ಸಂದೇಶಕ್ಕೆ ಪ್ರತಿಕ್ರಿಯೆ ಅಗತ್ಯವಿಲ್ಲ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ದೇಶವ್ಯಾಪಿ ತುರ್ತು ಸಂದೇಶ ರವಾನಿಸುವ ವ್ಯವಸ್ಥೆಯ ಪ್ರಯೋಗ ಇದಾಗಿದ್ದು, ಈ ಹಿನ್ನೆಲೆಯಲ್ಲಿ ಸಂದೇಶ ರವಾನಿಸಲಾಗಿದೆ ಎಂದು ಹೇಳಲಾಗಿದೆ.

ಪ್ರವಾಹ, ಸುನಾಮಿ, ಭೂಕಂಪದಂತಹ ತುರ್ತು ಸಂದರ್ಭದಲ್ಲಿ ದೇಶಾದ್ಯಂತ ಜನರಿಗೆ ಮೊದಲೇ ಮಾಹಿತಿ ನೀಡಲು ಸಂದೇಶ ಕಳುಹಿಸಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...