![](https://kannadadunia.com/wp-content/uploads/2022/08/earthquake-pti-1615179925-1659237070.jpg)
ವಿಜಯಪುರ : ವಿಜಯಪುರದಲ್ಲಿ ತಡರಾತ್ರಿ ಮತ್ತೆ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ರಾತ್ರಿ 12.22 ಹಾಗೂ ರಾತ್ರಿ 1.20ರ ಸುಮಾರಿಗೆ ಭೂಕಂಪನದ ಅನುಭವವಾಗಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.9 ಇದ್ದು, ಬೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಇನ್ನು ಭೂಕಂಪನದಿಂದ ಯಾವುದೇ ಅನಾಹುತ ಆಗಿಲ್ಲ. ಭೂಕಂಪನದಿಂದ ಆತಂಕಗೊಂಡ ಜನರು ಮನೆಯಿಂದ ಹೊರೆಗೆ ಓಡಿ ಬಂದಿದ್ದಾರೆ.