ಹಾಸನ : ಹಾಸನ ಜಿಲ್ಲೆಯ ಹಲವೆಡೆ ಭೂ ಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
ಹಾಸನ ಜಿಲ್ಲೆಯ ಅರಕಲಗೂಡು ಸೇರಿದಂತೆ ಹಲವು ಕಡೆ ಇಂದು 10:30 ರ ವೇಳೆಗೆ ಭೂಮಿ ಕಂಪಿಸಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಭೂ ತಜ್ಞ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಇಂದು ಮತ್ತು ನಾಳೆ ಭಾರಿ ‘ಮಳೆ’ ಮುನ್ಸೂಚನೆ
ಬೆಂಗಳೂರು : ರಾಜ್ಯದ ಹಲವು ಕಡೆ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ಇಂದು ಮಂಗಳವಾರ ಹಾಗೂ ನಾಳೆ ಬುಧವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಇಂದು ಮತ್ತು ನಾಳೆ ಭಾರೀ ಮಳೆ ಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾವೇರಿ, ಕಲಬುರಗಿ, ವಿಜಯಪುರ, ಬೆಳಗಾವಿ, ಬೀದರ್, ಧಾರವಾಡ, ಗದಗ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, , ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ ತುಮಕೂರು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗವು ಗಂಟೆಗೆ 40-45 ಕಿ.ಮೀ.ನಿಂದ 55 ಕಿ.ಮೀ. ಬೀಸುವ ಸಂಭವವಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.