ಕಲಬುರ್ಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲವು ಕಡೆ ಭೂಕಂಪನವಾಗಿದೆ.
ಕೋಡ್ಲಿ, ಹೊಸಳ್ಳಿ, ಹೊಡೆಬೀರನಹಳ್ಳಿ, ಗಡಿಕೇಶ್ವರ ಸೇರಿದಂತೆ 50 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ನಿನ್ನೆ ರಾತ್ರಿ 9.52 ರ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ರಷ್ಟು ದಾಖಲಾಗಿದೆ. ಪದೇಪದೇ ಭೂಮಿ ಕಂಪಿಸುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಆತಂಕ ಹೆಚ್ಚಾಗಿದೆ.
ರಾತ್ರಿ ಮತ್ತೆ ಭೂಮಿ ನಡುಗಿದ ಅನುಭವವಾಗಿದ್ದು, ಆತಂಕಗೊಂಡ ಜನ ಮನೆಯಿಂದ ಹೊರಗೆ ಬಂದು ತಮಗಾದ ಅನುಭವ ಹಂಚಿಕೊಂಡಿದ್ದಾರೆ.