alex Certify ರಾಜಸ್ಥಾನ, ಅರುಣಾಚಲ ಪ್ರದೇಶದಲ್ಲಿ ಭೂಕಂಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಸ್ಥಾನ, ಅರುಣಾಚಲ ಪ್ರದೇಶದಲ್ಲಿ ಭೂಕಂಪ

ನವದೆಹಲಿ: ಭಾನುವಾರ ಮುಂಜಾನೆ ರಾಜಸ್ಥಾನದ ಬಿಕಾನೇರ್‌ನಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ. ಬಿಕಾನೆರ್‌ ನಲ್ಲಿ ಮುಂಜಾನೆ 2:16 ಕ್ಕೆ ಭೂಕಂಪನ ಉಂಟಾಗಿದೆ. ಪಕ್ಕದ ಪ್ರದೇಶಗಳಲ್ಲೂ ಕಂಪನದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ತಿಳಿಸಿದೆ.

ಎನ್‌ಸಿಎಸ್ ಪ್ರಕಾರ, ಭೂಕಂಪದ ಕೇಂದ್ರಬಿಂದು ಬಿಕಾನೇರ್‌ನ ಪಶ್ಚಿಮಕ್ಕೆ 516 ಕಿಮೀ ದೂರದಲ್ಲಿದೆ ಮತ್ತು ಇದು 8 ಕಿಮೀ ಆಳದಲ್ಲಿ ಅಪ್ಪಳಿಸಿತು. ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ಇನ್ನೂ ವರದಿಯಾಗಿಲ್ಲ.

ಇದಕ್ಕೂ ಮುನ್ನ ಅರುಣಾಚಲ ಪ್ರದೇಶದ ಚಾಂಗ್ಲಾಂಗ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...