ಲೇಹ್: ಜಮ್ಮು ಮತ್ತು ಕಾಶ್ಮೀರದ ಲಡಾಖ್ ಸಮೀಪ ಭೂಮಿ ಕಂಪಿಸಿದೆ. ಲೇಹ್ ನ ಅಲ್ಚಿ ಪ್ರದೇಶದ ಉತ್ತರ ಭಾಗದಲ್ಲಿ ಭೂಕಂಪ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ 4.8 ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಮುಂಜಾನೆ 4.19ರ ಸಮಯದಲ್ಲಿ ಭೂಮಿ ಕಂಪಿಸಿದೆ.
ಲೇಹ್ ನ ಅಲ್ಚಿಯ ಉತ್ತರಕ್ಕೆ 189 ಕಿಮೀ ಉತ್ತರಕ್ಕೆ 4.8 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಶುಕ್ರವಾರ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಮುಂಜಾನೆ 4:19ಕ್ಕೆ ಭೂಕಂಪ ಸಂಭವಿಸಿದ್ದು, ಭೂಮಿಯಿಂದ 10 ಕಿ.ಮೀ ಆಳದಲ್ಲಿದೆ.
ಕಳೆದ ವಾರದ ಆರಂಭದಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪವು ಜಮ್ಮು ಮತ್ತು ಕಾಶ್ಮೀರದ ಕತ್ರಾದಿಂದ 62 ಕಿಮೀ ಪೂರ್ವ ಈಶಾನ್ಯ ಭಾಗದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ದೇಶದಲ್ಲಿ ಭೂಕಂಪದ ಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡಲು ಭಾರತ ಸರ್ಕಾರದ ನೋಡಲ್ ಏಜೆನ್ಸಿಯಾಗಿದೆ.