ಛತ್ತೀಸ್ಗಡದಲ್ಲಿ ಇಂದು ಬೆಳಿಗ್ಗೆ 11 ಗಂಟೆ 57 ನಿಮಿಷಕ್ಕೆ ಸುಮಾರು ಭೂಕಂಪನ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ಹತ್ತು ಕಿಮೀ ಭೂಮಿಯಾಳದಲ್ಲಿ ಕಂಪನ ಸಂಭವಿಸಿದ್ದು, ತಕ್ಷಣಕ್ಕೆ ಯಾವುದೇ ಹಾನಿ ಕುರಿತು ಮಾಹಿತಿ ತಿಳಿದು ಬಂದಿಲ್ಲ.
ಭೂಕಂಪನ ಸಂಭವಿಸುತ್ತಿದ್ದಂತೆ ಜನರು, ಮನೆ ಹಾಗೂ ಕಚೇರಿಗಳಿಂದ ಹೊರಗೋಡಿ ಬಂದಿದ್ದಾರೆ. ಆದರೆ ತೀವ್ರತೆ ಕಡಿಮೆ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ಜಪಾನ್ ನಲ್ಲಿಯೂ ಸಹ ಗುರುವಾರದಂದು 5.6 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಹೇಳಲಾಗಿದ್ದು, ಕರಾವಳಿ ಪ್ರದೇಶದಲ್ಲಿ ಈ ಕಂಪನ ಸಂಭವಿಸಿದರೂ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ.