![](https://kannadadunia.com/wp-content/uploads/2021/09/1593789618_earthquake.jpg)
ನವದೆಹಲಿ: ಲಡಾಖ್ ನ ಕಾರ್ಗಿಲ್‌ನಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಮಾಹಿತಿ ಪ್ರಕಾರ, ಲಡಾಖ್‌ನ ಕಾರ್ಗಿಲ್‌ನಲ್ಲಿ ರಾತ್ರಿ 7:01 ಕ್ಕೆ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ.
ಸಂಜೆ 7:01 ಕ್ಕೆ ಕಾರ್ಗಿಲ್, ಲಡಾಖ್‌ನ NNW ನ 146 ಕಿಲೋಮೀಟರ್‌ನಲ್ಲಿ ಕಂಪನದ ಅನುಭವವಾಯಿತು. 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಈ ಭೂಮಿ ಕಂಪಿಸಿದ ಅನುಭವವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಯಾವುದೇ ಹಾನಿಯಾದ ವರದಿಯಾಗಿಲ್ಲ.