
ನವದೆಹಲಿ: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1 ರಷ್ಟು ದಾಖಲಾಗಿದೆ.
ಮುಂಜಾನೆ 5 ಗಂಟೆ 3 ನಿಮಿಷಕ್ಕೆ ಭೂಮಿ ಕಂಪಿಸಿದ್ದು, ಬೆಳಗಿನಜಾವ ನಿದ್ದೆಯಲ್ಲಿದ್ದರು ಆತಂಕಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ. ಭೂಮಿ ಕಂಪಿಸಿದ ಅನುಭವ ಹಂಚಿಕೊಂಡಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.