
ಗುಜರಾತ್‌ನ ಅಮ್ರೇಲಿಯಲ್ಲಿ ಭಾನುವಾರ ಭೂಕಂಪನದ ಅನುಭವವಾಗಿದೆ. ಭೂಕಂಪದ ನಂತರ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.7 ರಷ್ಟಿದೆ.
ಈ ಹಿಂದೆಯೂ ಇಲ್ಲಿ ಭೂಕಂಪನದ ಅನುಭವವಾಗಿತ್ತು. ಆದರೆ, ಯಾವುದೇ ರೀತಿಯ ಹಾನಿಯಾಗಿರುವ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಭೂಕಂಪನದಿಂದ ಆತಂಕಗೊಂಡ ಜನ ತಮಗಾದ ಅನುಭವ ಹಂಚಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.