ನವದೆಹಲಿ: ಶನಿವಾರ ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ರಾತ್ರಿ 9.34ರ ಸುಮಾರಿಗೆ ಭೂಕಂಪ ಸಂಭವಿಸಿದೆ.
ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ಭೂಕಂಪದ ಕೇಂದ್ರ ಬಿಂದು ಇದ್ದು, ರಿಕ್ಟರ್ ಮಾಪಕದಲ್ಲಿ 5.6 ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ತಕ್ಷಣಕ್ಕೆ ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.