ವಿಜಯಪುರ: ವಿಜಯಪುರ ಜಿಲ್ಲೆಯ ಹಲವು ಕಡೆಗಳಲ್ಲಿ ಮತ್ತೆ ಭೂಮಿ ಕಂಪಿಸಿದೆ. ತಿಕೋಟಾ ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನವಾಗಿದೆ.
ಬೆಳಗಿನ ಜಾವ ಮೂರು ಗಂಟೆಯಿಂದ ಐದು ಗಂಟೆಯವರೆಗೆ ಹಲವು ಬಾರಿ ಭೂಮಿ ಕಂಪಿಸಿದ್ದು, ಆತಂಕಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಕೆಲವರು ತಮಗೆ ಆದ ಕಂಪನದ ಅನುಭವ ಹಂಚಿಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಹಲವು ಬಾರಿ ಭೂಮಿ ಕಂಪಿಸುತ್ತಿದ್ದು, ಭೂಕಂಪನದಿಂದ ವಿಜಯಪುರ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.