ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಕೂದಲು ಉದುರುವ ಸಮಸ್ಯೆ ಕಾಡುತ್ತಿದೆ. ಅನೇಕರಿಗೆ ಚಿಕ್ಕ ವಯಸ್ಸಿನಲ್ಲೇ ಕೂದಲು ಉದುರಿ ತಲೆ ಬೋಳಾಗುತ್ತದೆ. ಪೌಷ್ಟಿಕಾಂಶದ ಕೊರತೆ, ಅನಾರೋಗ್ಯಕರ ಜೀವನಶೈಲಿ ಮತ್ತು ರಾಸಾಯನಿಕಗಳ ಬಳಕೆಯಿಂದಾಗಿ ಇದು ಸಂಭವಿಸುತ್ತದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ತರಹೇವಾರಿ ಉತ್ಪನ್ನಗಳನ್ನು ಬಳಸಿದರೂ ಕೂದಲು ಉದುರುವುದನ್ನು ತಡೆಯಲು ಆಗುವುದಿಲ್ಲ. ಹಾಗಾಗಿ ಅವುಗಳ ಬದಲು ದೇಸೀ ಉಪಾಯವೊಂದನ್ನು ಪ್ರಯತ್ನಿಸಿ ನೋಡಿ.
ಇದು ಕೂದಲು ಉದುರುವಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನಿಲ್ಲಿಸುತ್ತದೆ ಮತ್ತು ಹೊಸ ಕೂದಲು ಬೆಳೆಯಲು ಸಹಾಯ ಮಾಡುತ್ತದೆ. ಇದಕ್ಕಾಗಿ ಯಾವುದೇ ರಾಸಾಯನಿಕ ಉತ್ಪನ್ನವನ್ನು ಬಳಸಬೇಕಾಗಿಲ್ಲ. ಇದೊಂದು ಮನೆಮದ್ದು. ಬೊಕ್ಕತೆಯ ಸಮಸ್ಯೆಯಿಂದ ಬಳಲುತ್ತಿರುವವರಿಗೂ ಇದರಿಂದ ಸಹಾಯವಾಗುತ್ತದೆ. ಈರುಳ್ಳಿ ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಈ ಕಾರಣದಿಂದಾಗಿ ಈರುಳ್ಳಿಯನ್ನು ಕೂದಲಿನ ಉತ್ಪನ್ನಗಳಲ್ಲಿಯೂ ಬಳಸಲಾಗುತ್ತದೆ.
ಕೂದಲು ಉದುರುವುದನ್ನು ತಡೆಯಲು ಈರುಳ್ಳಿಗೆ ಸಂಬಂಧಿಸಿದ ಮನೆಮದ್ದನ್ನು ಪ್ರಯತ್ನಿಸಿ. ಈರುಳ್ಳಿ ರಸವನ್ನು ತೆಗೆದು ಅದನ್ನು ತಲೆಗೆ ಅನ್ವಯಿಸಿ. ಕೇವಲ 5 ನಿಮಿಷಗಳ ಕಾಲ ಅದನ್ನು ಹಾಗೇ ಬಿಡಿ. ಹೀಗೆ ಮಾಡುವುದರಿಂದ ಕೂದಲು ಆರೋಗ್ಯಕರವಾಗಿರುತ್ತದೆ. ಜೊತೆಗೆ ಬೋಳುತಲೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹತ್ತಿಯ ಸಹಾಯದಿಂದ ನೆತ್ತಿಯ ಮೇಲೆ ಈರುಳ್ಳಿ ರಸವನ್ನು ಅನ್ವಯಿಸಿ. ಇದಾದ ತಲೆಗೆ ಎಣ್ಣೆ ಮಸಾಜ್ ಮಾಡುವ ರೀತಿಯಲ್ಲಿಯೇ ಬೆರಳುಗಳ ಸಹಾಯದಿಂದ ನೆತ್ತಿಗೆ ಚೆನ್ನಾಗಿ ಮಸಾಜ್ ಮಾಡಿ. 5 ನಿಮಿಷಗಳ ನಂತರ ಕೂದಲನ್ನು ತೊಳೆಯಿರಿ.
ವಾರಕ್ಕೊಮ್ಮೆ ಹೀಗೆ ಮಾಡುವುದರಿಂದ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ರಾಸಾಯನಿಕ ಉತ್ಪನ್ನಗಳ ಬಳಕೆಯು ಕೆಲವೊಮ್ಮೆ ಪ್ರಯೋಜನಕ್ಕೆ ಬದಲಾಗಿ ಹಾನಿಯನ್ನುಂಟುಮಾಡುತ್ತದೆ. ಈ ಮನೆಮದ್ದನ್ನು ಬಳಸುವುದರಿಂದ ಕೂದಲಿಗೆ ಯಾವುದೇ ಅಡ್ಡ ಪರಿಣಾಮಗಳನ್ನು ಉಂಟುಮಾಡುವುದಿಲ್ಲ. ಕೂದಲು ಉದುರುವಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನಿವಾರಿಸುತ್ತದೆ. ತಜ್ಞರ ಪ್ರಕಾರ ಅತಿಯಾದ ರಾಸಾಯನಿಕ ಉತ್ಪನ್ನಗಳ ಬಳಕೆ ಅಥವಾ ಅತಿಯಾದ ಹೇರ್ ಸ್ಟೈಲಿಂಗ್‌ನಿಂದಲೂ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.