ಬದನೆಕಾಯಿ ಒಗರು ಎಂಬ ಕಾರಣಕ್ಕೆ ಅದನ್ನು ಸೇವಿಸದೆ ದೂರವಿಡಬೇಡಿ. ಇದರಿಂದ ನಿಮ್ಮ ದೇಹಕ್ಕೆ ಹಲವು ಆರೋಗ್ಯ ಪ್ರಯೋಜನಗಳಿವೆ. ಅದರಲ್ಲೂ ಮಹಿಳೆಯರು ಇದನ್ನು ನಿತ್ಯ ಸೇವಿಸುವುದು ಬಹಳ ಒಳ್ಳೆಯದು.
ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಬದನೆಕಾಯಿ ಬಲೂಪಕಾರಿ. ಇದು ಹೃದಯ ಸಂಬಂಧಿ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇದರಲ್ಲಿರುವ ಕಬ್ಬಿಣದ ಅಂಶಗಳು ಕೆಂಪು ರಕ್ತಕಣಗಳು ಹೆಚ್ಚುವಂತೆ ಮಾಡುತ್ತದೆ.
ಜೀರ್ಣಕ್ರಿಯೆಯನ್ನು ಹೆಚ್ಚು ಮಾಡುತ್ತದೆ. ದೇಹಕ್ಕೆ ಸಾಕಷ್ಟು ಪ್ರಮಾಣದ ನಾರಿನಂಶವನ್ನು ಒದಗಿಸುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್ ಪ್ರಮಾಣವೂ ಕಡಿಮೆ ಇರುವುದರಿಂದ ದೇಹ ತೂಕ ಕಡಿಮೆ ಮಾಡಲು ಇದು ನೆರವಾಗುತ್ತದೆ.
ಸ್ಮರಣ ಶಕ್ತಿಯನ್ನು ಹೆಚ್ಚಿಸುವ ತರಕಾರಿಯಾಗಿರುವ ಬದನೆಕಾಯಿಯನ್ನು ತುಪ್ಪದಲ್ಲಿ ಹುರಿದು ಸೇವನೆ ಮಾಡಿದರೆ ಕಣ್ಣಿನ ಸಮಸ್ಯೆಗಳು ದೂರವಾಗುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಕೂದಲ ಬೆಳವಣಿಗೆಗೂ ನೆರವಾಗುತ್ತದೆ. ತ್ವಚೆಯ ತೇವಾಂಶವನ್ನೂ ಹಿಡಿದಿಡಲು ಇದು ಸಹಕಾರಿ.