
ಕೊಲೆಸ್ಟ್ರಾಲ್ ಸದ್ಯ ಸರ್ವೆ ಸಾಮಾನ್ಯ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರವಾಗಿದೆ. ಇದನ್ನು ಕಡಿಮೆ ಮಾಡಲು ಕೆಲ ಹಣ್ಣುಗಳು ಸಹಾಯ ಮಾಡಲಿವೆ.
ಸ್ಟ್ರಾಬೆರಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸ್ಟ್ರಾಬೆರಿ ಆ್ಯಂಟಿ ಆಕ್ಸಿಡೆಂಟ್ ಗುಣಗಳಿಂದ ಸಮೃದ್ಧವಾಗಿವೆ. ಹಾಗಾಗಿ ಇದನ್ನು ಸೇವನೆ ಮಾಡಬೇಕು.
ಸೇಬುಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪೆಕ್ಟಿನ್ ಅಂಶ ಇದ್ದು, ಇದನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು.
ಸಿಟ್ರಸ್ ಹಣ್ಣುಗಳಾದ ಕಿತ್ತಳೆ ಮತ್ತು ನಿಂಬೆ ತಿನ್ನಬಹುದು. ಇದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ. ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಿರುತ್ತದೆ. ಇದು ಅನಗತ್ಯ ಕೊಬ್ಬಿನಂಶ ಹೆಚ್ಚಾಗದಂತೆ ತಡೆಯುತ್ತದೆ.
ದ್ರಾಕ್ಷಿ, ಕೊಲೆಸ್ಟ್ರಾಲ್ ಗೆ ಮಾತ್ರವಲ್ಲದೆ ಉತ್ತಮ ಆರೋಗ್ಯಕ್ಕೂ ಹೆಚ್ಚು ಪ್ರಯೋಜನಕಾರಿ. ದ್ರಾಕ್ಷಿಯನ್ನು ತಿನ್ನುವುದರಿಂದ ತೂಕವನ್ನು ನಿಯಂತ್ರಿಸಬಹುದು. ಆವಕಾಡೊ ಕೊಲೆಸ್ಟ್ರಾಲ್ ಅಂಶವನ್ನು ಬಹಳ ಕಡಿಮೆ ಮಾಡುತ್ತದೆ.