alex Certify ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸೇವಿಸಿ ಮೊಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸೇವಿಸಿ ಮೊಸರು

ಕೆಟ್ಟ ಜೀವನಶೈಲಿ ಮತ್ತು ಕೆಲಸದ ಒತ್ತಡದಿಂದ ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವುದು ಅತಿ ಅವಶ್ಯಕ. ಇಲ್ಲವಾದರೆ ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಇದನ್ನು ಪ್ರತಿದಿನ ಸೇವಿಸಿ.

ಅಧ್ಯಯನವೊಂದರ ಪ್ರಕಾರ ಪ್ರತಿದಿನ ಮೊಸರು ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಬಹುದು ಮತ್ತು ಹೃದಯ ಸಂಬಂಧ ಕಾಯಿಲೆಗಳಿಂದ ನಿಮ್ಮನ್ನು ಕಾಪಾಡಬಹುದು ಎಂಬುದಾಗಿ ತಿಳಿದುಬಂದಿದೆ. ಹಾಗಾಗಿ ಅಧಿಕ ರಕ್ತದೊತ್ತಡ ರೋಗಿಗಳಲ್ಲಿ ಮೊಸರು ಸೇವನೆಯು ಪ್ರಯೋಜನಕಾರಿಯಾಗಿದೆ. ಇದು ರಕದೊತ್ತಡವನ್ನು ಕಡಿಮೆ ಮಾಡುತ್ತದೆಯಂತೆ.

ಅಧಿಕ ರಕ್ತದೊತ್ತಡವು ಹೃದಯರಕ್ತನಾಳದ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ನೀವು ರಕ್ತದೊತ್ತಡವನ್ನು ನಿಯಂತ್ರಿಸುವುದು ಅವಶ್ಯಕ. ಅದಕ್ಕಾಗಿ ನೀವು ಡೈರಿ ಆಹಾರವಾದ ಮೊಸರನ್ನು ಸೇವಿಸಿ. ಇದು ಕ್ಯಾಲ್ಸಿಯಂ, ಮೆಗ್ನೀಶಿಯಂ ಮತ್ತು ಪೊಟ್ಯಾಶಿಯಂತಹ ಪೋಷಕಾಂಶಗಳನ್ನು ಹೊಂದಿದ್ದು, ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಹಾಗೇ ಮೊಸರಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳಿದ್ದು, ಇದು ಪ್ರೋಟೀನ್ ಗಳನ್ನು ಬಿಡುಗಡೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಇದು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆಯಂತೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...