
ಡ್ರೈ ಫ್ರೂಟ್‌ನಿಂದ ನಮ್ಮ ಆರೋಗ್ಯದ ಮೇಲಾಗುವ ಉತ್ತಮ ಪರಿಣಾಮಗಳ ಬಗ್ಗೆ ಎಲ್ಲರಿಗೂ ತಿಳಿದಿದೆ. ಯಾಕಂದ್ರೆ ಅವುಗಳಲ್ಲಿ ಪೋಷಕಾಂಶಗಳು ಸಮೃದ್ಧವಾಗಿರುತ್ತವೆ. ಆರೋಗ್ಯಕರ ಡ್ರೈಪ್ರೂಟ್‌ಗಳಲ್ಲಿ ಪಿಸ್ತಾ ಕೂಡ ಸೇರಿದೆ. ಅದರ ರುಚಿ ಅನೇಕ ಜನರನ್ನು ಆಕರ್ಷಿಸುತ್ತದೆ.
ಸಾಮಾನ್ಯವಾಗಿ ರುಚಿಕರವಾದ ತಿನಿಸುಗಳು ಮತ್ತು ಸಿಹಿತಿಂಡಿಗಳನ್ನು ಅಲಂಕರಿಸಲು ಇದನ್ನು ಬಳಸಲಾಗುತ್ತದೆ. ತೂಕ ಇಳಿಸಿಕೊಳ್ಳಲು ಯೋಚಿಸುತ್ತಿರುವವರಿಗೆ, ಪಿಸ್ತಾ ತುಂಬಾ ಉಪಯುಕ್ತವಾಗಿದೆ. ಪಿಸ್ತಾದಲ್ಲಿ ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಬಿ 6, ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಕೆ, ಫೋಲೇಟ್, ಪ್ರೊಟೀನ್, ತಾಮ್ರ, ರಂಜಕ, ಮೆಗ್ನೀಸಿಯಮ್, ಮ್ಯಾಂಗನೀಸ್ ಮುಂತಾದ ಖನಿಜಗಳಿವೆ. ಇವೆಲ್ಲವೂ ದೇಹಕ್ಕೆ ಬಹಳ ಪ್ರಯೋಜನಕಾರಿ.
1. ತೂಕ ಇಳಿಕೆ: ಪಿಸ್ತಾದಲ್ಲಿ ಕ್ಯಾಲೋರಿಗಳು ತುಂಬಾ ಕಡಿಮೆ, ಆದ್ದರಿಂದ ಇದು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಇದನ್ನು ತಿನ್ನುವುದರಿಂದ ನಿಮಗೆ ದೀರ್ಘಕಾಲದವರೆಗೆ ಹಸಿವಾಗುವುದಿಲ್ಲ. ಇದು ಬೊಜ್ಜು ಕಡಿಮೆ ಮಾಡುವುದಲ್ಲದೆ ಹೃದ್ರೋಗದಂತಹ ಗಂಭೀರ ಕಾಯಿಲೆಗಳಿಗೆ ಮೂಲವಾದ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.
2. ಕಣ್ಣಿನ ಆರೋಗ್ಯ: ಪಿಸ್ತಾವು ನಮ್ಮ ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಉಪಯುಕ್ತವಾದ ಲುಟೀನ್ ಮತ್ತು ಜಿಯಾಕ್ಸಾಂಥಿನ್‌ನಂತಹ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಹಾಗಾಗಿ ನಿಯಮಿತವಾಗಿ ಪಿಸ್ತಾ ಸೇವನೆ ಮೂಲಕ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
3. ನೆನಪಿನ ಶಕ್ತಿ ಹೆಚ್ಚಳ: ಜ್ಞಾಪಕ ಶಕ್ತಿ ಕಡಿಮೆ ಇರುವವರು ಅಥವಾ ಮರೆವಿನ ಸಮಸ್ಯೆ ಇರುವವರು ಪಿಸ್ತಾವನ್ನು ನಿಯಮಿತವಾಗಿ ಸೇವಿಸಬಹುದು. ಇದು ಮನಸ್ಸನ್ನು ಚುರುಕಾಗಿಡಲು ಸಹಾಯ ಮಾಡುತ್ತದೆ.
4. ಕ್ಯಾನ್ಸರ್ ತಡೆಗಟ್ಟುತ್ತದೆ : ಪಿಸ್ತಾವು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ನಮ್ಮ ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತದೆ. ಹಾಗಾಗಿ ಪಿಸ್ತಾ ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.