
ನವದೆಹಲಿ: ಜಾರ್ಖಂಡ್, ತ್ರಿಪುರಾ, ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವಿಧಾನಸಭಾ ಉಪಚುನಾವಣೆಗೆ ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಸೆಪ್ಟೆಂಬರ್ 5 ರಂದು 7 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಇಸಿಐ ಪ್ರಕಾರ, ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 17 ಮತ್ತು ಉಮೇದುವಾರಿಕೆಯನ್ನು ಹಿಂಪಡೆಯಲು ಕೊನೆಯ ದಿನಾಂಕ ಆಗಸ್ಟ್ 21 ಆಗಿದೆ.
ಶಾಸಕರ ಸಾವು ಅಥವಾ ರಾಜೀನಾಮೆಯಿಂದ ಉಪಚುನಾವಣೆ ಅನಿವಾರ್ಯವಾಗಿದೆ. ಉತ್ತರಾಖಂಡದ ಬಾಗೇಶ್ವರ್ ಮತ್ತು ಪಶ್ಚಿಮ ಬಂಗಾಳದ ಧುಪ್ಗುರಿ ಸ್ಥಾನಗಳು ಪರಿಶಿಷ್ಟ ಜಾತಿಗಳಿಗೆ(ಎಸ್‌ಸಿ) ಮೀಸಲಾಗಿದೆ.