alex Certify BIG SHOCKING NEWS: ಕೊರೊನಾ ಎರಡನೇ ಅಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ 1 ಕೋಟಿ ಜನ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ಕೊರೊನಾ ಎರಡನೇ ಅಲೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ 1 ಕೋಟಿ ಜನ….!

ಕೊರೊನಾ ಸೋಂಕು ದೇಶದ ಆರ್ಥಿಕ ಪರಿಸ್ಥಿತಿ ಮೇಲೆ ಪರಿಣಾಮ ಬೀರಿದೆ. ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ 1 ಕೋಟಿಗೂ ಹೆಚ್ಚು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಹಿಂದಿನ ವರ್ಷ ಕೊರೊನಾ ಆರಂಭವಾದಾಗಿನಿಂದ ಈವರೆಗೆ ಶೇಕಡಾ 97ರಷ್ಟು ಕುಟುಂಬಗಳ ಆದಾಯ ಕುಸಿದಿದೆ.

ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ವ್ಯಾಸ್ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇ ತಿಂಗಳಲ್ಲಿ ನಿರುದ್ಯೋಗ ದರವು ಶೇಕಡಾ 12 ರಷ್ಟಿತ್ತು. ಏಪ್ರಿಲ್‌ನಲ್ಲಿ ಇದು ಶೇಕಡಾ 8 ರಷ್ಟಿತ್ತು ಎಂದು ವ್ಯಾಸ್ ಹೇಳಿದ್ದಾರೆ. ಈ ಅವಧಿಯಲ್ಲಿ ಸುಮಾರು ಒಂದು ಕೋಟಿ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದಾರೆ. ಕೋವಿಡ್ -19 ಸೋಂಕಿನ ಎರಡನೇ ತರಂಗವೇ ಉದ್ಯೋಗ ತೊರೆಯಲು ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ.

ಉದ್ಯೋಗ ಕಳೆದುಕೊಂಡ ಜನರು ಹೊಸ ಉದ್ಯೋಗಗಳನ್ನು ಹುಡುಕುವುದು ಕಷ್ಟಕರವಾಗಿದೆ. ಅಸಂಘಟಿತ ವಲಯದಲ್ಲಿ ಉದ್ಯೋಗಗಳು ವೇಗವಾಗಿ ಸೃಷ್ಟಿಯಾಗುತ್ತವೆ. ಆದರೆ ಸಂಘಟಿತ ವಲಯದಲ್ಲಿ ಉತ್ತಮ ಉದ್ಯೋಗ ಪಡೆಯಲು ಸಮಯ ತೆಗೆದುಕೊಳ್ಳುತ್ತದೆ ಎಂದು ವ್ಯಾಸ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...