
ವಂಚನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಖೇಶ್ ಜೊತೆ ನಿಕಟ ಸಂಬಂಧ ಹೊಂದಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಸಂಕಷ್ಟ ಎದುರಾಗಿದೆ.
ಸುಕೇಶ್ ತಾನು ಅಕ್ರಮವಾಗಿ ಗಳಿಸಿದ ಹಣದಲ್ಲಿ ದೊಡ್ಡ ಮೊತ್ತವನ್ನು ಜಾಕ್ವಲಿನ್ ಫರ್ನಾಂಡೀಸ್ ಅವರಿಗೆ ನೀಡಿದ್ದಾನೆ ಎನ್ನಲಾಗಿದ್ದು, ಅಲ್ಲದೆ ಐಷಾರಾಮಿ ಕಾರು ಸೇರಿದಂತೆ ದುಬಾರಿ ಗಿಫ್ಟ್ ಗಳನ್ನು ಕೊಡಿಸಿದ್ದ ಎನ್ನಲಾಗಿದೆ.
BIG NEWS: ಗೃಹ ಸಚಿವ ಸ್ಥಾನಕ್ಕೆ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ; ಸಿದ್ದರಾಮಯ್ಯ ಒತ್ತಾಯ
ಈ ಹಿನ್ನೆಲೆಯಲ್ಲಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ, ಇದೀಗ ನಟಿಗೆ ಸೇರಿದ ಆಸ್ತಿಗಳನ್ನು ಸೀಜ್ ಮಾಡಿದೆ.