![](https://kannadadunia.com/wp-content/uploads/2018/03/karti-chidambaram-at-patiala-house-courts_76b06f22-23c1-11e8-8baa-23f2d497fa41.jpg)
ನವದೆಹಲಿ: ಐಎನ್‌ಎಕ್ಸ್ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.
ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಮೂರು ಚರ ಮತ್ತು ಒಂದು ಸ್ಥಿರಾಸ್ತಿ ಸೇರಿದಂತೆ ನಾಲ್ಕು ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ.
ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರ 11.04 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.