ಜಾರಿ ನಿರ್ದೇಶನಾಲಯ (ಇಡಿ) ಪ್ರಸ್ತುತ ಮುಂಬೈನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಇಬ್ರಾಹಿಂ ಸಹೋದರಿ ಹಸೀನಾ ಪಾರ್ಕರ್ ಅವರ ನಿವಾಸ ಸೇರಿದಂತೆ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಹಲವಾರು ಆಸ್ತಿಗಳ ಮೇಲೆ ಮಂಗಳವಾರ ಅಂದ್ರೆ ಫೆಬ್ರವರಿ 15ರಂದು ದಾಳಿ ಮಾಡಿದೆ. ಭೂಗತ ಜಗತ್ತಿನ ಹಲವಾರು ಲಿಂಕ್‌ಗಳು, ಅಕ್ರಮ ಆಸ್ತಿ ವ್ಯವಹಾರಗಳು ಮತ್ತು ಹವಾಲಾ ವಹಿವಾಟುಗಳೊಂದಿಗೆ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಹುಡುಕಾಟ ನಡೆಸುತ್ತಿದೆ. ಈ ದಾಳಿಯಲ್ಲಿ ಹಸೀನಾ ಪಾರ್ಕರ್ ಅವರ ಆಸ್ತಿಯೂ ಸೇರಿದೆ ಎಂದು ತಿಳಿದು ಬಂದಿದೆ.
ಭೂಗತ ಲೋಕಕ್ಕೆ (Underworld) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ಒಬ್ಬ ವ್ಯಕ್ತಿಯನ್ನು ಮುಂಬೈನಲ್ಲಿ ಬಂಧಿಸಿದೆ. ಹಸೀನಾ ಪಾರ್ಕರ್ ಮನೆ ಸೇರಿ, ಮಹಾರಾಷ್ಟ್ರದ ರಾಜಧಾನಿಯಲ್ಲಿ ಸುಮಾರು ಹತ್ತು ಸ್ಥಳಗಳ ಮೇಲೆ ಇಡಿ ದಾಳಿ ನಡೆಸಿ ಹುಡುಕಾಟ ನಡೆಸುತ್ತಿದೆ. ಅಲ್ಲದೇ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್‌ಗಳ ಅಡಿಯಲ್ಲಿ ಕ್ರಮವನ್ನು ಜರುಗಿಸಲಾಗುತ್ತಿದೆ.
BIG BREAKING: ಹಿಜಾಬ್ ವಿವಾದ; ಮತ್ತೆ ವಿಚಾರಣೆ ಮುಂದೂಡಿದ ಹೈಕೋರ್ಟ್
ಅಕ್ರಮ ಹಣ ವರ್ಗಾವಣೆ ತಡೆ ಸಂಸ್ಥೆ ಮುಂಬೈ ಭೂಗತ ಜಗತ್ತಿನ ಹವಾಲಾ, ಸುಲಿಗೆ ಮತ್ತು ಅಕ್ರಮ ಆಸ್ತಿ ವ್ಯವಹಾರಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಹುಡುಕುತ್ತಿದೆ ಎಂದು ಮೂಲಗಳು ತಿಳಿಸಿವೆ. ಈ ವ್ಯವಹಾರಗಳಿಗೆ ಕೆಲವು ರಾಜಕೀಯ ಲಿಂಕ್‌ಗಳು ಸಹ ಏಜೆನ್ಸಿಯ ರೇಡಾರ್ ಅಡಿಯಲ್ಲಿವೆ ಎಂದು ಮೂಲಗಳು ತಿಳಿಸಿವೆ.
1993ರ ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಮತ್ತು ಪರಾರಿಯಾಗಿರುವ ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇತ್ತೀಚೆಗೆ ದಾಖಲಿಸಿದ ಎಫ್‌ಐಆರ್ ಮತ್ತು ಕೆಲವು ಸ್ವತಂತ್ರ ಗುಪ್ತಚರ ಮಾಹಿತಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಂಬೈನ ಹಲವಾರು ಆಸ್ತಿಗಳಲ್ಲಿ ಶೋಧ ನಡೆಸುತ್ತಿದೆ ಎಂದು ವರದಿಯಾಗಿದೆ.