ಬೆಂಗಳೂರು: ಕೆ.ಎಸ್.ಎಫ್.ಸಿ. ಅಧಿಕಾರಿ ಬಿ.ಸಿ. ಶಾಂತಕುಮಾರ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಡಿ ವಿಶೇಷ ನ್ಯಾಯಾಲಯದಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದೆ.
ಆದಾಯ ಮೀರಿದ ಆಸ್ತಿಗಳಿಕೆ, ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಕೆ.ಎಸ್.ಎಫ್.ಸಿ. ಸಹಾಯಕ ವ್ಯವಸ್ಥಾಪಕ ಶಾಂತಕುಮಾರ್ ಅವರಿಗೆ ಶಿಕ್ಷೆ ವಿಧಿಸಲಾಗಿದೆ.
ಆರಂಭದಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರತ್ಯೇಕವಾಗಿ ಜಾರಿ ನಿರ್ದೇಶನಲಯ ಪ್ರಕರಣ ದಾಖಲಿಸಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಗಿದೆ.