
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಪ್ರಭಾವಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಆರೋಗ್ಯ ಖಾತೆ ಸಚಿವರಾಗಿರುವ ಪ್ರಭಾವಿ ನಾಯಕ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ ನಂತರ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದ್ದಾರೆ.
ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ ಹವಾಲಾ ವಹಿವಾಟಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.