ಮುಂಬೈ: ನನ್ನ ಮತ್ತು ಶಿವಸೇನೆ ಪಕ್ಷದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆದಿದೆ. ನಾನು ಯಾರಿಗೂ ತಲೆಬಾಗುವುದಿಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಇಡಿ ಅಧಿಕಾರಿಗಳು ತಮ್ಮನ್ನು ವಶಕ್ಕೆ ಪಡೆಯುವ ಮುನ್ನ ಟ್ವೀಟ್ ಮಾಡಿದ್ದಾರೆ.
ನನ್ನನ್ನು ಸೋಲಿಸಲು ಸಾಧ್ಯವಿಲ್ಲ. ನಾನು ಎಂದಿಗೂ ಯಾರಿಗೂ ತಲೆಬಾಗುವುದಿಲ್ಲ. ಜೈ ಮಹಾರಾಷ್ಟ್ರ ಎಂದು ಟ್ವೀಟ್ ಮಾಡಿದ್ದಾರೆ.
ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು, ಪಕ್ಷದ ನಾಯಕ ಸಂಜಯ್ ರಾವತ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಬಹುದು. ಅವರ ವಿರುದ್ಧ ಸಂಸ್ಥೆ ನಡೆಸುತ್ತಿರುವ ಕ್ರಮವು ಪಕ್ಷವನ್ನು ಮುಗಿಸುವ ಪಿತೂರಿ ಯ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.
ಹಿಂದೂಗಳು ಮತ್ತು ಮರಾಠಿಗರಿಗೆ ಶಿವಸೇನೆ ಬಲ ನೀಡುತ್ತದೆ. ಆದ್ದರಿಂದ ಪಕ್ಷವನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಅವರು ಹೇಳಿದರು.