
ಚಿತ್ರದುರ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿ ಪ್ಯಾಲೆಸ್ಟೈಲ್ ಬಾವುಟ ಹಿಡಿದು ಮೆರವಣಿಗೆಯಲ್ಲಿ ಸಾಗಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಚಿತ್ರದುರ್ಗ ನಗರದ ಗಾಂಧಿ ವೃತ್ತದ ಬಳಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಯುವಕರ ಗುಂಪೊದು ಪ್ಯಾಲೆಸ್ಟೈನ್ ಬಾವುಟ ಹಿಡಿದು, ಪ್ಯಾಲೆಸ್ಟೈನ್ ಜಿಂದಾಬಾದ್ ಎಂದು ಘೋಷಣೆ ಕೂಗಿದೆ. ತಕ್ಷಣ ಎಚ್ಚೆತ್ತ ಪೊಲೀಸರು ಎರಡು ಧ್ವಜಗಳನ್ನು ವಶಕ್ಕೆ ಪಡೆದು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಇದೇ ವೇಳೆ ಕೋಲಾರ ನಗರದಲ್ಲಿಯೂ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿದ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.