ರಾಮನಗರ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿ ನೋಟಿಸ್ ಬೆನ್ನಲ್ಲೇ ಇದೀಗ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಆಪ್ತ ಇಕ್ಬಾಲ್ ಹುಸೇನ್ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ.
ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಅವರಿಗೆ ಕಳೆದ ವರ್ಷ 3 ಕೋಟಿ ರೂಪಾಯಿ ಹಣ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪ ಹಿನ್ನೆಲೆಯಲ್ಲಿ ಇಡಿಯಿಂದ ನೋಟೀಸ್ ನೀಡಲಾಗಿದೆ. ಆದರೆ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಇಕ್ಬಾಲ್ ವಿಚಾರಣೆಗೆ ಹಾಜರಾಗದೇ ಕಾಲಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.