
ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂ. ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು 30 ಲಕ್ಷ ದೋಚಿದ್ದ ಎಸ್ಐಎಸ್ ಸೇರಿ ಮೂವರನ್ನು ಬಂಧಿಸಲಾಗಿದೆ. ಕೇರಳದ ಕೋಡಂಗಲ್ ಸಹಾಯಕ ಪೊಲೀಸ್ ನಿರೀಕ್ಷಕ ಶಫೀರ್, ಕೃತ್ಯಕ್ಕೆ ಮನೆ ಮಾಹಿತಿ ನೀಡಿದ್ದ ಬಂಟ್ವಾಳದ ಮಹಮದ್ ಇಕ್ಬಾಲ್, ಮಂಗಳೂರಿನ ಪಡೀಲು ನಿವಾಸಿ ಮಹಮ್ಮದ್ ಅನ್ಸಾರ್ ಅವರನ್ನು ಬಂಧಿಸಲಾಗಿದೆ.
ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ಆರೋಪಿಗಳು ಜನವರಿ 3ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ನಾರ್ಶ ಎಂಬಲ್ಲಿ ದಾಳಿ ನಡೆಸಿ ಹಣ ದೋಚಿದ್ದರು.