ಬೆಂಗಳೂರು : ಐಟಿ ದಾಳಿ ಬೆನ್ನಲ್ಲೇ ಬೆಂಗಳೂರಿನಲ್ಲಿ ಇಂದು ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಉದ್ಯಮಿ ಮನೆ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಉದ್ಯಮಿಯೋರ್ವ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡು ಕಂಪನಿಗಳ ಎಂಡಿ ಮತ್ತು ಡೈರೆಕ್ಟರ್ ಆಗಿರುವ ಉದ್ಯಮಿಯ ಕಸವಿನಹಳ್ಳಿ ಬಳಿ ಇರುವ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಕಂಪನಿ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಲೋನ್ ಪಡೆದು ವಂಚನೆ ಮಾಡಿದ್ದಾರೆ ಎನ್ನಲಾಗಿದ್ದು, ಎಸ್ ಬಿಐ ಬ್ಯಾಂಕ್ ನಿಂದ 354 ಕೋಟಿ ರೂ. ಲೋನ್ ಪಡೆದು ವಂಚಿಸಿದ್ದಾರೆ ಎಂಬ ಆರೋಪವಿದೆ. ಈ ವಂಚನೆ ಪ್ರಕರಣ ಇಡಿಗೆ ವರ್ಗಾವಣೆಯಾಗಿತ್ತು.
ಗುತ್ತಿಗೆದಾರರ ಮನೆ ಮೇಲೆ ದಾಳಿ ನಡೆಸಿ ಕೋಟ್ಯಾಂತರ ರೂ ಹಣ ಪತ್ತೆ ಮಾಡಿದ ಬೆನ್ನಲ್ಲೇ ಇದೀಗ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಉದ್ಯಮಿ ಗಳಿಗೆ ಶಾಕ್ ನೀಡಿದ್ದಾರೆ. ಉದ್ಯಮಿ ಉಷಾ ರಾಮನಾನಿ ಮನೆ ಹಾಗೂ ಕಂಪನಿಗಳ ಕಚೇರಿಗಳ ಮೇಲೆ ದಾಳಿ ನಡೆದಿದೆ.