
ಮೈಸೂರು: ಮುಡಾ ಕಚೇರಿಯಲ್ಲಿ ಜಾರಿ ನಿರ್ದೇಶನಾಲಯ ಶೋಧ ಕಾರ್ಯ ಅಂತ್ಯವಾಗಿದೆ. ತಡರಾತ್ರಿ 2.30ರ ವರೆಗೂ ಇಡಿ ಶೋಧ ಕಾರ್ಯಾಚರಣೆ ನಡೆಸಿದೆ.
ಶೋಧ ಕಾರ್ಯಾಚರಣೆ ಮುಗಿಸಿದ ಇಡಿ ಅಧಿಕಾರಿಗಳು ದಾಖಲೆಗಳ ಸಮೇತ ಬೆಂಗಳೂರಿಗೆ ತೆರಳಿದ್ದಾರೆ. ಎರಡು ಬಾಕ್ಸ್ ಗಳಲ್ಲಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.
ನಿವೇಶನ ಹಂಚಿಕೆಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಜಾರಿ ನಿರ್ದೇಶನ ಅಧಿಕಾರಿಗಳು ದಾಳಿ ನಡೆಸಿ ಎರಡು ದಿನಗಳಿಂದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಎರಡು ಹಾರ್ಡ್ ಡಿಸ್ಕ್ ಗಳಲ್ಲಿ ದಾಖಲೆಗಳನ್ನು ಸಂಗ್ರಹಿಸಿಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಪತ್ರದ ಮೂಲ ಪ್ರತಿಯನ್ನು ಕೂಡ ಮುಡಾದಿಂದ ವಶಪಡಿಸಿಕೊಂಡಿದ್ದಾರೆ. ತಾಲೂಕು ಕಚೇರಿಯಿಂದಲೂ ಅನೇಕ ದಾಖಲೆ ವಶಕ್ಕೆ ಪಡೆಯಲಾಗಿದೆ.