ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಭಾರತ್ ಇನ್ ಫ್ರಾ ಎಕ್ಸ್ ಪೋರ್ಟ್ ಆಂಡ್ ಇಂಪೋರ್ಟ್ ಕಂಪನಿ ಮೇಲೆ ದಾಳಿ ನಡೆಸಿದ್ದಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 113.38 ಕೋಟಿ ರೂಪಾಯಿ ಸಾಲ ಉಳಿಸಿಕೊಂಡ ಆರೋಪ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ನೀಡಿದ ಆರೋಪ ಭಾರತ್ ಇಫ್ರಾ ವಿರುದ್ಧ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತ್ ಇನ್ ಫ್ರಾ ಎಕ್ಸ್ ಪೋರ್ಟ್ ಆಂಡ್ ಇಂಪೋರ್ಟ್ ನ ಬೆಂಗಳೂರು, ದಾವಣಗೆರೆ ಕಂಪನಿಗಳ ಮೇಲೆ ಇಡಿ ದಾಳಿ ನಡೆಸಿವೆ.
ದಾಳಿ ವೇಳೆ 100 ಕೋಟಿ ರೂ. ಚಿರಾಸ್ತಿ ಜಪ್ತಿ ಮಾಡಲಾಗಿದೆ. ಅಲ್ಲದೇ 14.5 ಲಕ್ಷ ಕೋಟಿ ನಗದು ಹಣ, ಹಲವು ದಾಖಲೆಗಳು, ಡಿಜಿಟಲ್ ಸಾಧನಗಳು ಹಾಗೂ ಸಂಬಂಧಿತ ಸಂಸ್ಥೆಗಳ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.