
ನವದೆಹಲಿ: ದೇಶಾದ್ಯಂತ ಎಸ್ ಡಿಪಿಐ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಂಟು ಹೊಂದಿರುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.
ಬೆಂಗಳೂರು, ದೆಹಲಿ, ಕೇರಳ, ಆಂಧ್ರಪ್ರದೇಶ ,ಜಾರ್ಖಂಡ್, ಮಹಾರಾಷ್ಟ್ರ, ಪುಣೆ, ಚೆನ್ನೈ, ಕೋಲ್ಕತ್ತಾ, ಲಖನೌ, ಜೈಪುರ ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ಏಕಕಾಲದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಪಿಎಫ್ಐ ಹಾಗೂ ಎಸ್ ಡಿಪಿಐ ನಡುವೆ ಸಂಘಟನಾತ್ಮಕ ಸಂಬಂಧವಿದೆ. ತನ್ನ ರಾಜಕೀಯ ಪಕ್ಷ ಎಸ್ ಡಿಪಿ ಐ ಮೂಲಕ ಪಿಎಫ್ಐ ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿಸಿಕೊಂಡಿತ್ತು ಎಂದು ಆರೋಪಿಸಿದೆ.