alex Certify ಟೆಂಡರ್ ಹಗರಣ: ಬೆಳ್ಳಂಬೆಳಗ್ಗೆ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಂಡರ್ ಹಗರಣ: ಬೆಳ್ಳಂಬೆಳಗ್ಗೆ ಸಿಎಂ ಆಪ್ತನ ಮನೆ ಮೇಲೆ ಇಡಿ ದಾಳಿ

ರಾಂಚಿ: ಜಾರ್ಖಂಡ್ ರಾಜ್ಯದ 18 ಕಡೆಗಳಲ್ಲಿ ಜಾರಿ ನಿರ್ದೇಶನಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಆಪ್ತನ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಪಂಕಜ್ ಮಿಶ್ರಾ ಅವರ ಮನೆಗಳು ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮುಖ್ಯಮಂತ್ರಿ ಸೋರೆನ್ ಅವರ ಶಾಸಕ ಪ್ರತಿನಿಧಿಯಾಗಿರುವ ಪಂಕಜ್ ಮಿಶ್ರಾ ಅವರಿಗೆ ಸೇರಿದ ಸಾಹೇಬ್ ಗಂಜ್, ಬೆರ್ಹೈತ್, ರಾಜಮಹಲ್ ಸೇರಿ 18 ಕಡೆ ದಾಳಿ ನಡೆಸಲಾಗಿದೆ. ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಶುಕ್ರವಾರ ಜಾರಿ ನಿರ್ದೇಶನಾಲಯ(ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಶಾಸಕ ಪ್ರತಿನಿಧಿ ಪಂಕಜ್ ಮಿಶ್ರಾ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಿದೆ. ಪ್ರಸ್ತುತ, ಟೆಂಡರ್ ಹಗರಣಕ್ಕೆ ಸಂಬಂಧಿಸಿದಂತೆ ಸಾಹೇಬ್‌ಗಂಜ್, ಬೆರ್ಹೈತ್ ಮತ್ತು ರಾಜಮಹಲ್ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...