ಮುಂಬೈ: ಶಿವಸೇನೆ ನಾಯಕ ಸಂಜಯ್ ರಾವತ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಪ್ತ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವತ್ ಅವರಿಗೆ ಇಡಿಯಿಂದ ಸಮನ್ಸ್ ಜಾರಿ ಮಾಡಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಮನಿ ಲಾಂಡರಿಂಗ್, ಭೂಹಗರಣದಲ್ಲಿ ರಾಜ್ಯಸಭೆ ಸದಸ್ಯ ಸಂಜಯ್ ರಾವತ್ ಗೆ ಇಡಿ ಸಮನ್ಸ್ ಜಾರಿಗೊಳಿಸಿದ್ದು, ಪ್ರಕರಣದ ಸಂಬಂಧ ಕೆಲವು ಆಸ್ತಿಗಳನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ನಾನು ಇಡಿ ವಿಚಾರಣೆಗೆ ಹೆದರುವ ಪ್ರಶ್ನೆಗೆ ಇಲ್ಲ ಎಂದು ಸಂಜಯ್ ರಾವತ್ ಹೇಳಿದ್ದಾರೆ. ಇವತ್ತು ವಿಚಾರಣೆಗೆ ಹಾಜರಾಗುವುದಿಲ್ಲ. ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಬೇಕಿರುವುದರಿಂದ ಇಡಿ ವಿಚಾರಣೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.