ನವದೆಹಲಿ: ಯಾವುದೇ ಕ್ಷಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾಗುವ ಸಾಧ್ಯತೆ ಇದೆ. ದೆಹಲಿಯ ಕೇಜ್ರಿವಾಲ್ ನಿವಾಸಕ್ಕೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆಗಮಿಸಿದ್ದಾರೆ.
ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ. ದೆಹಲಿ ಹೈಕೋರ್ಟ್ ನಲ್ಲಿ ಕೇಜ್ರಿವಾಲ್ ಗೆ ಹಿನ್ನಡೆಯಾಗಿದೆ. ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ಮತ್ತು ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಕೇಜ್ರಿವಾಲ್ ನಿವಾಸಕ್ಕೆ ಆಗಮಿಸಿದ್ದಾರೆ.
ಅನೇಕ ಸಲ ನೋಟಿಸ್ ನೀಡಿದ್ದರೂ ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿರಲಿಲ್ಲ. ಅವರು ದೆಹಲಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಬೆನ್ನಲ್ಲೇ ಇಡಿ ಅಧಿಕಾರಿಗಳು ನಿವಾಸಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಮುನ್ನೆಚ್ಚರಿಕೆ ಕ್ರಮವಾಗಿ ಕೇಜ್ರಿವಾಲ್ ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.