alex Certify BIG NEWS : ರಾಜ್ಯದ 5,8,9 ನೇ ತರಗತಿ ವಿದ್ಯಾರ್ಥಿಗಳಿಗೆ ‘ಶಿಕ್ಷಣ ಇಲಾಖೆ’ ಗುಡ್ ನ್ಯೂಸ್ ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ 5,8,9 ನೇ ತರಗತಿ ವಿದ್ಯಾರ್ಥಿಗಳಿಗೆ ‘ಶಿಕ್ಷಣ ಇಲಾಖೆ’ ಗುಡ್ ನ್ಯೂಸ್ ..!

ಬೆಂಗಳೂರು : ರಾಜ್ಯದ 5,8,9 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕ ದಾಖಲಿಸಿ ಮುಂದಿನ ತರಗತಿಗಳಿಗೆ ದಾಖಲಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ಉಲ್ಲೇಖ-2ರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿರುತ್ತದೆ. ತದನಂತರದಲ್ಲಿ ಫಲಿತಾಂಶವನ್ನು ಪ್ರಕಟಿಸಲು ಘನ ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು ಅಂತಿಮ ತೀರ್ಪು ಬಾಕಿ ಇರುತ್ತದೆ.

ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದ್ದು, ದಿನಾಂಕ: 29-05-2024 ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪುಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಉಲ್ಲೇಖ-3ರನ್ನಯ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಆಗತ್ಯ ಕ್ರಮ ವಹಿಸುವಂತೆ ಕೋರಿರುತ್ತಾರೆ. ಅದರಂತೆ ಮಕ್ಕಳ ಶೈಕ್ಷಣಿಕ ಭವಿಷ್ಯ ಸುಗಮಗೊಳಿಸಲು ಈ ಕೆಳಕಂಡಂತೆ ಕ್ರಮವಹಿಸುವುದು.

ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ:8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA- 1, FA-2, FA-3, FA-4  SA-1 ತರಗತಿಗೆ ಮುಂದುವರೆಸಲು ಅವಕಾಶ ಕಲ್ಪಿಸುವುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...