11,494 ಪದವೀಧರ ಶಿಕ್ಷಕರ ನೇಮಕಾತಿ: ಸ್ವೀಕೃತಿ ಪತ್ರ ಪಡೆಯಲು ಸೂಚನೆ

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರರಿಂದ ಸ್ವೀಕೃತಿ ಪತ್ರ ಪಡೆಯಲು ಡಿಡಿಪಿಐಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸುಪ್ರೀಂಕೋರ್ಟ್ ತೀರ್ಪಿನ ಷರತ್ತಿಗೆ ಒಳಪಟ್ಟಿರುತ್ತದೆ ಎಂಬುದನ್ನು ನೇಮಕವಾದ ಶಿಕ್ಷಕರ ಗಮನಕ್ಕೆ ತಂದು ಸ್ವೀಕೃತಿ ಪಡೆದುಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜನವರಿ 22ರಂದು ನೇಮಕಾತಿ ಪ್ರಕರಣದ ಬಗ್ಗೆ ಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಈ ಆದೇಶ ಪಡೆದು ನೇಮಕವಾದ 11,494 ಅಭ್ಯರ್ಥಿಗಳಿಗೆ ಸುಪ್ರೀಂ ಕೋರ್ಟ್ ತೀರ್ಪಿನ ಷರತ್ತಿಗೆ ನೇಮಕಾತಿ ಒಳಪಟ್ಟಿರುತ್ತದೆ ಎಂಬುದನ್ನು ತಿಳಿಸಿ ಅವರಿಂದ ಲಿಖಿತವಾಗಿ ಜಿಲ್ಲಾ ಉಪ ನಿರ್ದೇಶಕರು ಸ್ವೀಕೃತಿ ಪಡೆದುಕೊಳ್ಳಲು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read