alex Certify BIG NEWS : ಶಿಕ್ಷಕರನ್ನು ಬಿಎಲ್ಓ-ಬೋಧಕೇತರ ಕಾರ್ಯಗಳಿಗೆ ನಿಯೋಜಿಸದಂತೆ ‘ಶಿಕ್ಷಣ ಇಲಾಖೆ’ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶಿಕ್ಷಕರನ್ನು ಬಿಎಲ್ಓ-ಬೋಧಕೇತರ ಕಾರ್ಯಗಳಿಗೆ ನಿಯೋಜಿಸದಂತೆ ‘ಶಿಕ್ಷಣ ಇಲಾಖೆ’ ಸೂಚನೆ

ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್ಓ-ಬೋಧಕೇತರ ಕಾರ್ಯಗಳಿಗೆ ನಿಯೋಜಿಸದಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು,  ಶಾಲಾ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಪಾಧಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಯಾ ತರಗತಿಗಳಲ್ಲಿ ನಿಗಧಿಗೊಳಿಸಲಾಗಿರುವ ಪಠ್ಯವನ್ನು ಪೂರ್ಣಗೊಳಿಸಲು ಬೇಕಾದ ಅವಧಿಯನ್ನು ಮತ್ತು ಶಾಲಾ ರಜಾದಿನಗಳನ್ನು ಅಂದರೆ ಬೇಸಿಗೆ ದಸರಾ/ಕ್ರಿಸ್ ಮಸ್ ಈ ಸಾರ್ವತ್ರಿಕ ರಜಾದಿನಗಳಲ್ಲಿ ಗಣನೆಗೆ ತೆಗೆದುಕೊಂಡು ಶಾಲಾ ಕೆಲಸದ ದಿನಗಳನ್ನು ಕನಿಷ್ಟ 244 ದಿನಗಳಂದು ನಿಗದಿಪಡಿಸಲಾಗಿದೆ.

ಅದರೆ ಶಾಲಾ ಶಿಕ್ಷಕರುಗಳನ್ನು, ಜನಗಣತಿ, ಚುನಾವಣಾ ಕಾರ್ಯ, ಮಕ್ಕಳ ಗಣತಿ ಇವುಗಳಲ್ಲಿ ತೊಡಗಿಸಿಕೊಳ್ಳುವುದರ ಪರಿಣಾಮವಾಗಿ ಕನಿಷ್ಠ 244 ಶಾಲಾ ಕರ್ತವ್ಯದದಿನಗಳಲ್ಲಿ ಪರೀಕ್ಷೆಗಳು ಮತ್ತು ಮೌಲ್ಯಂಕನ ಕಾರ್ಯಕ್ಕಾಗಿ ಪಠ್ಯೇತರ ಚಟುವಟಿಕೆಗಳ (ಪತ್ರ ಚಟುವಟಿಕೆಗಳು, ಸ್ಪರ್ಧೆಗಳ ನಿರ್ವಹಣಾಕಾರ್ಯ/ ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣಾ ಕಾರ್ಯಕ್ಕಾಗಿ ಶಿಕ್ಷಕರುಗಳ ಸೇವೆಯನ್ನು ಮೇಲ್ಕಂಡ ಕಾರ್ಯಕ್ಕೆ ಬಳಸಿಕೂಳ್ಳುತ್ತಿರುವುದರಿಂದ ವಿದ್ಯಾರ್ಥಿಗಳ ಬೋಧನಾ-ಕಲಿಕಾ ಪ್ರಕ್ರಿಯೆಗೆ ಕೇವಲ 180 ದಿನಗಳು ಉಳಿಯುತ್ತದೆ. ಕನಿಷ್ಟ 180 ದಿನಗಳನ್ನು ಬೋಧನಾ ಕೆಲಸ ನಿರ್ವಹಿಸಲು ನಿಗದಿಪಡಿಸಿದ್ದರು ಸಹ ವಾಸ್ತವಿಕವಾಗಿ ಬೋಧನಾ ಕಾರ್ಯಕ್ಕೆ ಲಭ್ಯವಾಗುತ್ತಿಲ್ಲ. ಇದರಿಂದ ಬೋಧನಾ ಕೆಲಸವು ಕುಂಠಿತವಾಗುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.ಶಿಕ್ಷಕರನ್ನು ಬೋಧಕೇತರ ಕಾರ್ಯಗಳಿಗೆ ನಿಯೋಜಿಸಬಾರದೆಂದು ಆದೇಶಗಳನ್ನು ನೀಡಿರುತ್ತವೆ, ಅದರಿಂದ ಶಿಕ್ಷಕರನ್ನು ಮತದಾರರ ಪಟ್ಟಿ/ಬೋಧಕೇತರ ಕೆಲಸಕ್ಕೆ, ನಿಯೋಜನೆ ಮಾಡಬಾರದೆಂದು ಉಲ್ಲೇಖ 5 ಮತ್ತು 6 ರ ಸರ್ಕಾರದ ಸುತ್ತೋಲೆಗಳಲ್ಲಿ ತಿಳಿಸಿರುತ್ತದೆ.

ಈ ಕಾರಣದಿಂದ ಮತದಾರರ ಪಟ್ಟಿಗಳ ಪರಿಷ್ಕರಣೆ ಕಾರ್ಯಗಳಿಗೆ ನಿಯೋಜಿಸುವ ಬಗ್ಗೆ ಮಾನ್ಯ ಉಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯ ನೀಡಿರುವ ತೀರ್ಪುಗಳಲ್ಲಿ ಶಿಕ್ಷಕರುಗಳನ್ನು ಶಿಕ್ಷಣೇತರ ಕಾರ್ಯಗಳಿಗೆ ನಿಯೋಜಿಸುವುದರಿಂದ ನ್ಯಾಯಾಲಯ ಹಾಗೂ ಸರ್ಕಾರದ ಆದೇಶಗಳ ಉಲ್ಲಂಘನೆ ಆಗುತ್ತಿದೆ. ಆದ್ಯರಿಂದ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ/ಪ್ರೌಢ ಶಾಲಾ ಶಿಕ್ಷಕರನ್ನು ಚುನಾವಣಾ ರೋಲ್ ಪರಿಷ್ಕರಿಸುವ ಸಲುವಾಗಿ ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡಬಾರದೆಂದು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...