ಬೆಂಗಳೂರು: ರಾಜ್ಯದ 223 ಬರ ಪೀಡಿತ ತಾಲೂಕುಗಳ 1ರಿಂದ 10ನೇ ತರಗತಿ ಸರ್ಕಾರಿ ಶಾಲೆ ಮಕ್ಕಳಿಗೆ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಏಪ್ರಿಲ್ 11 ರಿಂದ ಮೇ 28 ರ ವರೆಗೆ 41 ದಿನಗಳ ಕಾಲ ಮಧ್ಯಾಹ್ನ 12:30 ರಿಂದ 2 ಗಂಟೆಯವರೆಗೆ ಬಿಸಿಯೂಟ ನೀಡಲಾಗುವುದು. ಉಷ್ಣಾಂಶ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಬೆಳೆಗೆ 10 ರಿಂದ 11:30 ಅವಧಿಯಲ್ಲಿ ಬಿಸಿಯೂಟ ವಿತರಿಸಲಾಗುವುದು.
ಶಾಲಾ ಮಕ್ಕಳ ಮಾಹಿತಿಗೆ ಅನುಗುಣವಾಗಿ ಬಿಸಿಯೂಟ ಸಿದ್ದಪಡಿಸಬೇಕು. ಪೋಷಕರು ಮತ್ತು ವಿದ್ಯಾರ್ಥಿಗಳ ಗಮನಕ್ಕೆ ತಂದು ಸ್ವೀಕರಿಸುವ ಒಪ್ಪಿಗೆ ಪತ್ರ ಪಡೆಯಬೇಕು. 250 ಕ್ಕಿಂತ ಹೆಚ್ಚು ಮಕ್ಕಳು ನಿರಂತರವಾಗಿ ಬಿಸಿಯೂಟ ಸ್ವೀಕರಿಸಲು ಹಾಜರಾಗುತ್ತಿದ್ದರೆ ಅಂತಹ ಶಾಲೆಗಳಿಗೆ ಒಬ್ಬರು ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಹೇಳಲಾಗಿದೆ.