alex Certify BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಿಸುವಂತೆ ‘ಶಿಕ್ಷಣ ಇಲಾಖೆ’ ಆದೇಶ ಹೊರಡಿಸಿದೆ.

ಹೌದು, ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಪ್ರತಿ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ಅಕ್ಟೋಬರ್ 31 ರಂದು “ರಾಷ್ಟ್ರೀಯ ಏಕತಾ ದಿನವನ್ನಾಗಿ’ ದೇಶದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ದಿನಾಂಕ : 31.10.2024 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ದೇಶದ ಏಕೀಕರಣಕ್ಕಾಗಿ, ದೇಶದ ಭದ್ರತೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್ರವರ ದೂರದೃಷ್ಟಿ ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ, ಏಕತಾ ಓಟ (Run for Unity) ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದು.

ಪ್ರತಿಜ್ಞೆ

“ರಾಷ್ಟ್ರೀಯ ಏಕತಾ ದಿವಸ್” ಪ್ರತಿಜ್ಞೆ ರಾಷ್ಟ್ರದ ಏಕತೆ ಸಮಗ್ರತೆ ಮತ್ತು ಭದ್ರತೆಯನ್ನು ಸಂರಕ್ಷಿಸುತ್ತೇನೆ ದೇಶವಾಸಿಗಳಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಪ್ರಾಮಾಣಿಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ನನ್ನ ದೇಶದ ಏಕತೆಗೆ ಉತ್ಸಾಹದಿಂದ ನಾನು ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನನ್ನದೇ ಆದ ಕೊಡುಗೆಯನ್ನು ನೀಡಲು ನಾನು ಸಂಕಲ್ಪ ಮಾಡುತ್ತೇನೆ.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ರವರು ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ”ರಾಷ್ಟ್ರೀಯ ಏಕತಾ ದಿನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಹಾಗೂ ಅನುಷ್ಠಾನಗೊಳಿಸಿದ ಬಗ್ಗೆ ಮಾಹಿತಿಯನ್ನು ರಾಜ್ಯ ಕಛೇರಿಗೆ ಇ-ಮೇಲ್ ssknasinn@gmail.comಗೆ ಸಲ್ಲಿಸುವಂತೆ ತಿಳಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...