ಬೆಂಗಳೂರು: ರಂಜಾನ್ ಆಚರಣೆ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಶಾಲಾ ವೇಳಾಪಟ್ಟಿ ಸಡಿಲಿಕೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಂಜಾನ್ ಆರಂಭದ ದಿನದಿಂದ ಒಂದು ತಿಂಗಳವರೆಗೆ ಉರ್ದು ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.
ರಂಜಾನ್ ತಿಂಗಳ ಆರಂಭದಿಂದ ಏಪ್ರಿಲ್ 10ರವರೆಗೆ ಉರ್ದು ಶಾಲೆಗಳ ಸಮಯವನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 12:45 ರವರೆಗೆ ನಿಗದಿಪಡಿಸಲಾಗಿದೆ. ಇತರೆ ಸರ್ಕಾರಿ, ಅನುದಾನ, ಅನುದಾನ ರಹಿತ ಶಾಲೆಗಳಲ್ಲಿನ ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಸಂಜೆ ಅರ್ಧ ಗಂಟೆ ಮೊದಲು ತೆರಳಲು ಅನುಮತಿ ನೀಡಲಾಗಿದೆ. ರಂಜಾನ್ ತಿಂಗಳಲ್ಲಿ ಕಡಿತಗೊಳ್ಳುವ ಶಾಲಾ ಸಮಯವನ್ನು ಮುಂದಿನ ರಜೆ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ತಿಳಿಸಲಾಗಿದೆ.