
ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಇಲಾಖೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ಸಿಡಿದೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ.
ತಾಲೂಕು ಹಂತದಲ್ಲಿ ಬಿಇಒ, ಡಿಡಿಪಿಐ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿರುವ ಖಾಸಗಿ ಶಾಲೆಗಳ ಒಕ್ಕೂಟ, ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಶಾಲೆಗಳ ರಿನಿವಲ್, ಉನ್ನತೀಕರಣದ ವೇಳೆ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಸರ್ಕಾರ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಇದೇ ರೀತಿ ಮುಂದುವರೆದರೆ ಖಾಸಗಿ ಶಾಲೆಗಳ ಒಕ್ಕೂಟ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದೆ.